Advertise

06 April 2024

07.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 
ಉತ್ತರ ಕನ್ನಡ ಭಾಗದಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಇವತ್ತಿನಿಂದ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ. ಎಪ್ರಿಲ್ 9ರಿಂದ ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...