Advertise

09 April 2024

10.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 

ಕೊಡಗು, ಹಾಸನ, ಶಿವಮೊಗ್ಗ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಇರಲಿದ್ದು, ಚಿಕ್ಕಮಗಳೂರು ಜಿಲ್ಲೆಯ ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರಿನಲ್ಲಿ ಉಂಟಾದ ಮೋಡಗಳು ಪೂರ್ವಕ್ಕೆ ಸಂಚರಿಸುವ ಸಾಧ್ಯತೆ ಇದ್ದು, ದಾವಣಗೆರೆಯ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಈಗಿನಂತೆ ಎಪ್ರಿಲ್ 12ರ ಮಳೆಯ ಸಾಧ್ಯತೆಯೂ ಕ್ಷೀಣಿಸುತ್ತಿದ್ದು, ಎಪ್ರಿಲ್ 17ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಲಕ್ಷಣಗಳಿವೆ. ಬೇಸಿಗೆ ಮಳೆಯ ವಾತಾವರಣವು ಕ್ಷಣ  ಕ್ಷಣಕ್ಕೂ ಬದಲಾಗುತ್ತಿರುವುದನ್ನು ಗಮನಿಸಬೇಕಾಗಿದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...