Advertise

13 April 2024

14.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ, ಧರ್ಮಸ್ಥಳ, ಚಾರ್ಮಾಡಿ, ಕಾರ್ಕಳ ಸುತ್ತಮುತ್ತ ಸ್ವಲ್ಪ ಜಾಸ್ತಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ, ಸಕಲೇಶಪುರ ಸುತ್ತಮುತ್ತ ಸಾಮಾನ್ಯ, ಚಿಕ್ಕಮಗಳೂರು, ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಅಲ್ಲಲ್ಲಿ ಉತ್ತಮ, ಬಾಗಲಕೋಟೆ, ವಿಜಾಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ,, ದಾವಣಗೆರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೆಲವು ಭಾಗಗಳಲ್ಲಿ ಗಾಳಿಯ ಒತ್ತಡದಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಈಗಿನಂತೆ  ಎಪ್ರಿಲ್ 14 ರಿಂದ ರಾಜ್ಯದಲ್ಲಿ ಮಳೆ ಕಡಿಯಾಗಲಿದ್ದು ಎಪ್ರಿಲ್ 18ರಿಂದ ಮಲೆನಾಡು ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿ (ದಕ್ಷಿಣ ಕನ್ನಡ ಹಾಗೂ ಉಡುಪಿ) ಎಪ್ರಿಲ್ 20ರಿಂದ ಹೆಚ್ಚು ವ್ಯಾಪ್ತಿಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...