Advertise

29 April 2024

30.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಧಿಕ ಉಷ್ಣತೆಯೊಂದಿಗೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. 

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಮೇ 6ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ. 

No comments:

Post a Comment

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ನಿನ್ನೆಯ ತನಕ ಮುನ್ಸೂಚನೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ...