Advertise

21 April 2024

22.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಹಾಗೂ ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬೆಳಗಾವಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಮಂಡ್ಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಾಗಲೇ ಮಳೆಯ ತೀವ್ರತೆ ಕಡಿಯಾಗಲಿದ್ದು, ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಂತಹ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ. 
ತೀವ್ರ ಉಷ್ಣಾಂಶ ಏರಿಕೆಯಿಂದಾಗಿ ಪರಿಸ್ಥಿತಿ ಬದಲಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 


No comments:

Post a Comment

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...