Advertise

22 April 2024

23.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕೊಡಗು ಹಾಗೂ ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಕೊಪ್ಪ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ  ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮುಂದಿನ 10 ದಿನಗಳವರೆಗೆ ರಾಜ್ಯದಲ್ಲಿ ಅಧಿಕ ಉಷ್ಣತೆಯಿಂದಾಗಿ ಒಂದೆರಡು ಕಡೆ, ಸೀಮಿತ ಪರಿಧಿಯಲ್ಲಿ ಅನಿರೀಕ್ಷಿತ ಮಳೆ ಹೊರತುಪಡಿಸಿ ತೀವ್ರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 


No comments:

Post a Comment

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ನಿನ್ನೆಯ ತನಕ ಮುನ್ಸೂಚನೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ...