23 April 2024

24.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಹಾಗೂ ಶಿವಮೊಗ್ಗ - ಉತ್ತರ ಕನ್ನಡ ಗಡಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ( ಆದರೆ ಈಗಿನ ಪರಿಸ್ಥಿತಿ ಗಮನಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ) 

ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಉಳಿದ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು ಒಂದೆರಡು ಕಡೆ, ಚಿತ್ರದುರ್ಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. 

ಈಗಿನಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ದೊಡ್ಡ ಪ್ರಮಾಣದ ಹಾಗೂ ಅಧಿಕ ವ್ಯಾಪ್ತಿಯ ಮಳೆ ಕಾಣಿಸುತ್ತಿಲ್ಲ 

No comments:

Post a Comment