Advertise

25 April 2024

26.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಒಣ ಹವೆ ಆವರಿಸುವ ಮುನ್ಸೂಚನೆ ಇದೆ. 

ಕೊಡಗು ಹಾಗೂ ಚಿಕ್ಕಮಗಳೂರಲ್ಲಿ  ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮೇ 1ರಿಂದ ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 
ಕರಾವಳಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ ಸಧ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 


No comments:

Post a Comment

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ನಿನ್ನೆಯ ತನಕ ಮುನ್ಸೂಚನೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ...