01.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚೆನೆ ಇದೆ.
ಮೈಸೂರು ಹಾಗೂ ಚಾಮರಾಜನಗರ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ. ಜೊತೆಗೆ ತಮಿಳುನಾಡು ಕಡೆಯಿಂದ ಬೀಸುವ ಗಾಳಿಯ ಪ್ರಭಾವದಿಂದ ಜೂನ್ 1 ಹಾಗೂ 2ನೇ ತಾರೀಕಿನಂದು ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಜೂನ್ 2ರಂದು ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗು ಲಕ್ಷಣಗಳಿವೆ. ಇದರ ಪರಿಣಾಮದಿಂದ ದುರ್ಬಲವಾಗಿ ಆರಂಭವಾಗುವ ಮುಂಗಾರು ಮತ್ತಷ್ಟು ದುರ್ಬಲಗೊಳ್ಳಲಿದೆ. ಜೂನ್ 15 ಅಥವಾ 20ರ ನಂತರ ಮುಂಗಾರು ಚುರುಕಾಗುವ ಲಕ್ಷಣಗಳಿವೆ.