Advertise

18 May 2024

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಗಾಳಿಯ ಚಲನೆಯ ದಿಕ್ಕು ನಿಖರತೆ ಇಲ್ಲದಿರುವುದರಿಂದ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಎಲ್ಲಾ ಕಡೆ ಮಳೆಯಾಗುತ್ತಿಲ್ಲ. ಸುಳ್ಯ ತಾಲೂಕಿನ ಪೂರ್ವ ಭಾಗ ಹಾಗೂ ದಕ್ಷಿಣ ಭಾಗದಲ್ಲಿ ಘಟ್ಟ ಪ್ರದೇಶವಾದ್ದರಿಂದ ಹೆಚ್ಚು ಮಳೆಯಾಗುತ್ತಿದೆ. 
ಉತ್ತರ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 


ಮುಂಗಾರು ಮಾರುತಗಳು ಪ್ರಭಲವಾಗಿ ಅಂಡಮಾನ್ಗಿ ಕಡೆ ಚಲಿಸಲು ಆರಂಭವಾಗಿದ್ದು, ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು ಮೇ 25 ಅಥವಾ 26ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 
ಮುಂಗಾರು ಮುಂದುವರಿಕೆ ಯ
 ಈ ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಅವಲಂಬಿಸಿದೆ. 

17 May 2024

18.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ, ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಚಿತ್ರದುರ್ಗ, ದಾವಣಗೆರೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 
ಮೇ 17ರಿಂದ 23ರ ತನಕ ರಾಜ್ಯದ ದಕ್ಷಿಣ ಕರಾವಳಿ (ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು), ಮಲೆನಾಡು ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

16 May 2024

17.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ರಾಮನಗರ, ಬೆಂಗಳೂರು, ಕೋಲಾರ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 


ಚಿತ್ರದುರ್ಗ, ದಾವಣಗೆರೆ, ಹಾವೇರಿ,ಗದಗ, ಧಾರವಾಡ, ಬಳ್ಳಾರಿ, ರಾಯಚೂರು,  ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಮೆ 17ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

15 May 2024

16.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಕರ್ನಾಟಕ -  ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ  ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈಗಿನ ಪ್ರಕಾರ ಮೇ 21ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. 
ಮುಂಗಾರು ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಆಗಮಿಸುವ ವರದಿಗಳಿದ್ದರೂ, ಆರಂಭಿಕ ದುರ್ಬಲತೆ ಇದ್ದರೆ ರಾಜ್ಯಕ್ಕೆ ಪ್ರವೇಶಿಸಲು ಸಮಯ ತೆಗೆದುಕೊಳ್ಳುಬಹುದು.

14 May 2024

15.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


15.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈಗಿನ ಪ್ರಕಾರ ಮೇ 20ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 15ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. 


13 May 2024

14.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


14.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಹಾರಾಷ್ಟ್ರ - ಕರ್ನಾಟಕ ಗಡಿಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಈಗಿನ ಮುನ್ಸೂಚೆನೆಯಂತೆ ಮೇ 20ರ ತನಕವೂ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದರೂ ಮೇ 14ರಿಂದ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ. 

12 May 2024

13.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.05.2025 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

11 May 2024

12.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚೆನೆ ಇದೆ. (ಚಾರ್ಮಾಡಿ, ಆಗುಂಬೆ ಶಿೃಂಗೇರಿ, ಕೊಡಗು ಭಾಗಗಳಲ್ಲಿ 3.30pm ಮುಂಚೆ ಮಳೆ ಆರಂಭವಾದರೆ ಕರಾವಳಿ ಜಿಲ್ಲೆಗಳಿಗೆ ಮಳೆಯ ಸಾಧ್ಯತೆ ಹೆಚ್ಚಿದೆ.) ಉತ್ತರ ಕನ್ನಡ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ (ಸಕ್ಲೇಶ್ಪುರ ಸುತ್ತಮುತ್ತ), ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ. 

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

10 May 2024

11.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ. 

ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

09 May 2024

10.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಮೋಡ ಮಾತ್ರ ಇರಬಹುದು. 

ಕೊಡಗು, ಹಾಸನ, ಚಿಕ್ಕಮಗಳೂರು ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ (  ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ) ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಗಾಳಿಯ ಪ್ರಭಲವಾಗಿದ್ದರೆ ಮಂಡ್ಯ, ರಾಮನಗರ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

08 May 2024

09.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಮಾತ್ರ ಇರಬಹುದು. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡ ಮಾತ್ರ ಇರಬಹುದು. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಭಾಗಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ ಇದ್ದು, ಮೇ 11ರಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ವ್ಯಾಪ್ತಿಯಲ್ಲಿ ಮಳೆಯಾಗುವ ಲಕ್ಷಣಗಳಿವೆ. 

07 May 2024

08.05. 2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಇವತ್ತು ಬೆಳಿಗ್ಗೆ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾದ ಕಾರಣ ತಡ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು (ಸೋಮವಾರಪೇಟೆ ಸಹಿತ), ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ. 
ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಮೇ 10ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸಾಧ್ಯತೆ ಇದೆ. 


06 May 2024

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಇರಬಹುದು. 

ಈಗಿನಂತೆ ಮೇ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. ಮೇ 9 ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆ ಇದೆ. 


05 May 2024

06.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಲಕ್ಷಣಗಳಿವೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡ ಇರಬಹುದು.  ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನಂತೆ ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.  ಮೇ 8 ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚೆನೆ ಇದೆ.
ಕರಾವಳಿಯಲ್ಲಿ ವ್ಯಾಪಕವಾಗಿ ಉತ್ತಮ ಮಳೆಯು ಮೇ 11ರ ನಂತರ ಸಾಧ್ಯತೆ ಇದೆ. 

04 May 2024

05.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಮೋಡ ಹಾಗೂ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

 ನಿನ್ನೆಯಿಂದ ಕರ್ನಾಟಕದ ದಕ್ಷಿಣ ಒಳನಾಡು, ಕೊಡಗು, ದಕ್ಷಿಣ ಕರಾವಳಿ ಭಾಗಗಳಲ್ಲಿ ಉಷ್ಣಾಂಶ ಸಾಮಾನ್ಯ ಸ್ಥಿತಿಗೆ ತಲುಪಿದರುತ್ತದೆ. ಈಗಿನಂತೆ ಮೇ 6ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ ಪೂರ್ವ ಮುಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಮೇ 7 ಅಥವಾ 8ರಿಂದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

03 May 2024

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಮುನ್ಸೂಚೆನೆಯಂತೆ ಇವತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದರೂ ಮೇ 4 ಹಾಗೂ 5 ರಂದು ಮೋಡ ಮಾತ್ರ ಇರಬಹುದು. ಮೇ 6ರಿಂದ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


02 May 2024

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಈಗಿನ ಅಧಿಕ ಉಷ್ಣತೆ ಇನ್ನೂ 2 ರಿಂದ 3 ದಿವಸಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಹೆಚ್ಚಿನ ಭಾಗಗಳಲ್ಲಿ 40° C ಗಿಂತಲೂ ಅಧಿಕ ತಾಪಮಾನ ದಾಖಲಾಗಿದೆ.

ಈಗಿನಂತೆ ರಾಜ್ಯದಲ್ಲಿ ಮೇ 6 ರಿಂದ ಆರಂಭವಾಗುವ ಪೂರ್ವ ಮುಂಗಾರು ಮಳೆಯು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಅಧಿಕವಾಗಿದೆ. 

01 May 2024

02.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ, ಶಿೃಂಗೇರಿ, ಚಾರ್ಮಾಡಿ, ಕುದುರೆಮುಖ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...