Advertise

08 May 2024

09.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಮಾತ್ರ ಇರಬಹುದು. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡ ಮಾತ್ರ ಇರಬಹುದು. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಭಾಗಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ ಇದ್ದು, ಮೇ 11ರಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ವ್ಯಾಪ್ತಿಯಲ್ಲಿ ಮಳೆಯಾಗುವ ಲಕ್ಷಣಗಳಿವೆ. 

No comments:

Post a Comment

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ನಿನ್ನೆಯ ತನಕ ಮುನ್ಸೂಚನೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ...