Advertise

01 May 2024

02.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ, ಶಿೃಂಗೇರಿ, ಚಾರ್ಮಾಡಿ, ಕುದುರೆಮುಖ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

No comments:

Post a Comment

20.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...