Advertise

11 May 2024

12.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚೆನೆ ಇದೆ. (ಚಾರ್ಮಾಡಿ, ಆಗುಂಬೆ ಶಿೃಂಗೇರಿ, ಕೊಡಗು ಭಾಗಗಳಲ್ಲಿ 3.30pm ಮುಂಚೆ ಮಳೆ ಆರಂಭವಾದರೆ ಕರಾವಳಿ ಜಿಲ್ಲೆಗಳಿಗೆ ಮಳೆಯ ಸಾಧ್ಯತೆ ಹೆಚ್ಚಿದೆ.) ಉತ್ತರ ಕನ್ನಡ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ (ಸಕ್ಲೇಶ್ಪುರ ಸುತ್ತಮುತ್ತ), ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ. 

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳ...