16 May 2024

17.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ರಾಮನಗರ, ಬೆಂಗಳೂರು, ಕೋಲಾರ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 


ಚಿತ್ರದುರ್ಗ, ದಾವಣಗೆರೆ, ಹಾವೇರಿ,ಗದಗ, ಧಾರವಾಡ, ಬಳ್ಳಾರಿ, ರಾಯಚೂರು,  ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಮೆ 17ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

No comments:

Post a Comment