ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಗಾಳಿಯ ಚಲನೆಯ ದಿಕ್ಕು ನಿಖರತೆ ಇಲ್ಲದಿರುವುದರಿಂದ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಎಲ್ಲಾ ಕಡೆ ಮಳೆಯಾಗುತ್ತಿಲ್ಲ. ಸುಳ್ಯ ತಾಲೂಕಿನ ಪೂರ್ವ ಭಾಗ ಹಾಗೂ ದಕ್ಷಿಣ ಭಾಗದಲ್ಲಿ ಘಟ್ಟ ಪ್ರದೇಶವಾದ್ದರಿಂದ ಹೆಚ್ಚು ಮಳೆಯಾಗುತ್ತಿದೆ.
ಉತ್ತರ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಮಾರುತಗಳು ಪ್ರಭಲವಾಗಿ ಅಂಡಮಾನ್ಗಿ ಕಡೆ ಚಲಿಸಲು ಆರಂಭವಾಗಿದ್ದು, ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು ಮೇ 25 ಅಥವಾ 26ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಮುಂಗಾರು ಮುಂದುವರಿಕೆ ಯ
ಈ ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಅವಲಂಬಿಸಿದೆ.
No comments:
Post a Comment