Advertise

19 May 2024

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. 
ಮೇ 24ರ ತನಕ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೇ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 


No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...