Advertise

25 May 2024

26.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ ಸುತ್ತಮುತ್ತ ಭಾಗಗಳಲ್ಲಿ ಪುತ್ತೂರು ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಮೇ 30ರ ತನಕ ಅವಕಾಶವಿದೆ

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೇ 30ರ ತನಕ ಮಳೆಯ ಸಾಧ್ಯತೆ ಕಾಣುತ್ತಿಲ್ಲ. 

ಚಾಮರಾಜನಗರ ಒಂದೆರಡು ಕಡೆ, ರಾಮನಗರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು. ಕರಾವಳಿ, ಮಲೆನಾಡು ಹೊರತುಪಡಿಸಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಈಗಿನಂತೆ ಮೇ 26ರಂದು ಸಂಜೆ ರೇಮಲ್ ಚಂಡಮಾರುತವು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಭಾರತದ ಈಶಾನ್ಯ ರಾಜ್ಯಗಳಲ್ಲಿ ಭಾರೀ ಅನಾಹುತ ಸೃಷ್ಠಿಸುವ ಲಕ್ಷಣಗಳಿವೆ. 
ರಾಜ್ಯಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. 


No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...