Advertise

27 May 2024

28.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಬಂಟ್ವಾಳ, ಪುತ್ತೂರು, ಸುಳ್ಯ, ಧರ್ಮಸ್ಥಳ, ಚಾರ್ಮಾಡಿ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು (ಕೇರಳ ಗಡಿ ಭಾಗಗಳಲ್ಲಿ) ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಬಾಳೆಹೊನ್ನೂರು, ಕುದುರೆಮುಖ, ಶಿೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ ರಾಯಚೂರು - ಆಂದ್ರಾ ಗಡಿಭಾಗಗಳಲ್ಲಿ, ಚಿತ್ರದುರ್ಗ, ದಾವಣಗೆರೆ, ಗದಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

ಈಗಿನಂತೆ ರೇಮಲ್ ಚಂಡಮಾರುತವು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರತದ ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಬಹಳಷ್ಟು ಹಾನಿ ಮಾಡುವ ಸಾಧ್ಯತೆ ಇದೆ. 
ಜೂನ್ 1ರಿಂದ ಮುಂಗಾರು ಆಗಮನದ ನಿರೀಕ್ಷೆ ಇದ್ದರೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ತೋಟಗಳಿಗೆ ಔಷಧಿ ಸಿಂಪಡಿಸಲು ಜೂನ್ ಮೊದಲ ವಾರದಲ್ಲಿಯೂ ಅವಕಾಶ ಸಿಗಬಹುದು. ಆದರೂ ದಿನಕ್ಕೊಂದರಂತೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...