Advertise

28 May 2024

29.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


29.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಜೂನ್ 1ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಜೂನ್ 2 ಅಥವಾ 3 ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಮುಂಗಾರು ಆರಂಭ ದುರ್ಬಲತೆ ಮುಂದುವರಿಯಲಿದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...