Advertise

29 May 2024

30.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದೆ. 
ಉಡುಪಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

 ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದ್ದು ಪ್ರಭಲವಾದ ಪಶ್ಚಿಮದ ಗಾಳಿಯು ಬೀಸುತ್ತಿದೆ. 
ಈಗಿನಂತೆ ಮೇ 31ರಿಂದ ಈ ರೀತಿಯ ಗಾಳಿಯ ಪ್ರಭಾವ ಕಡಿಮೆಯಾಗುವ ಲಕ್ಷಣಗಳಿವೆ. ಮೇ 31ರಿಂದ ಮಳೆ ಕಡಮೆಯಾದರೂ ದಿನದಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಮುಂಗಾರು ಆರಂಭಿಕ ದುರ್ಬಲತೆ ಮುಂದುವರಿಯಲಿದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...