Advertise

30 June 2024

01.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಪ್ರಕಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಜುಲೈ 5ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಕರಾವಳಿಯಲ್ಲಿ ಜುಲೈ 1 ರಿಂದ ಜುಲೈ 3ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿದ್ದು, ನಂತರ ಹೆಚ್ಚಾಗುವ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಕೇರಳದಲ್ಲಿ ಮಳೆ ಕ್ಷೀಣಿಸಲಿದೆ. 

29 June 2024

30.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ 2 ರಿಂದ 3 ಮಳೆಯ ಸಾಧ್ಯತೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಪ್ರಕಾರ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 4ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಜೂನ್ 30 ಹಾಗೂ ಜುಲೈ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಜುಲೈ 2 ರಿಂದ 4ರ ತನಕ ಕರಾವಳಿ ಭಾಗಗಳನ್ನು ಹೊರತು ಪಡಿಸಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಜುಲೈ 5 ಅಥವಾ 6ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. 



28 June 2024

29.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ 

ಧಾರವಾಡ, ಬೆಳಗಾವಿ ಚಿಕ್ಕೋಡಿ ಜಿಲ್ಲೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಈಗಿನಂತೆ ಇವತ್ತಿನಿಂದ ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಮಾಣ ಕುಂಠಿತವಾಗಲಿದ್ದು, ಉತ್ತರ ಭಾರತದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಭಾರತದ ಅಧಿಕ ಉಷ್ಣಾಂಶ ಸಾಮಾನ್ಯ ಸ್ಥಿತಿಗೆ ಬಂದರೆ, ಅಂದರೆ ಜುಲೈ 5 ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
ಆದರೆ ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆ ಕಡಿಮೆ. ದಿನದಲ್ಲಿ 2, 3 ಮಳೆಯ ಸಾಧ್ಯತೆ ಇದೆ. 

27 June 2024

28.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗುವ ಲಕ್ಷಣಗಳಿದ್ದರೂ  ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ರಾಜ್ಯದ ಮಲೆನಾಡು ಭಾಗಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಜೂನ್ 29ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಈಗ ರಾಜ್ಯದ ಒಳನಾಡು ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗುತ್ತಿದ್ದು, ಜುಲೈ 1 ಅಥವಾ 2 ರಿಂದ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಆದರೂ ಪರಿಸ್ಥಿತಿ ಬದಲಾಗಬಹುದು. ಕಾದು ನೋಡಬೇಕಾಗಿದೆ. 

26 June 2024

27.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈಗಾಗಲೇ ಮುಂಗಾರು ಚುರುಕಾಗಿದ್ದು ಈಗಿನ ಪ್ರಕಾರ ಜೂನ್ 29ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. 

25 June 2024

26.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು. 

ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಪ್ರಕಾರ ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸದರೂ, ಜುಲೈ ಮೊದಲವಾರದಲ್ಲಿ ಮತ್ತೆ ಚುರುಕಾಗುವ ಲಕ್ಷಣಗಳಿವೆ. 


24 June 2024

25.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನ ಪ್ರಕಾರ ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳಿದ್ದು, ಮಳೆಯ ಕೊರತೆ ಉಂಟಾಗಲಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮುನ್ಸೂಚನೆಯಲ್ಲಿ ಇದ್ದಷ್ಟು ಮಳೆಯಾಗುತ್ತಿಲ್ಲ. ಜೂನ್ 28ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ. 


23 June 2024

24.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉಡುಪಿ ಜಿಲ್ಲೆಯಾದ್ಯಂತ ಭಾರಿ (red alert) ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ ಉಡುಪಿ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ (red alert) 
ಮಳೆಯ ಮುನ್ಸೂಚೆನೆ ಇದೆ. ಕೊಡಗು ಸಹ ಭಾರಿ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳು ಉತ್ತಮವಾಗಿ ಬೀಸುತ್ತಿದ್ದರೂ  ಕರಾವಳಿಯಿಂದ ಈಚೆ ಬರುತ್ತಿದ್ದಂತೆ ದುರ್ಬಲಗೊಳ್ಳುತ್ತಿದೆ. ಆ ಕಾರಣದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅಥವಾ ಮುನ್ಸೂಚನೆಯಲ್ಲಿ ಕಾಣಿಸುವಷ್ಟು ಮಳೆಯಾಗುತ್ತಿಲ್ಲ. ಜುಲೈನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. 
ರಾಜ್ಯದ ಈಗಿನ ಈ ಮಳೆಯ ವಾತಾವರಣವು ಜೂನ್ 28ರ ತನಕ ಮುಂದುವರಿಯುವ ಲಕ್ಷಣಗಳಿವೆ. ಜೂನ್ 29ರಿಂದ ಉತ್ತರ ಭಾರತದಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. 

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...