Advertise

30 June 2024

01.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಪ್ರಕಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಜುಲೈ 5ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಕರಾವಳಿಯಲ್ಲಿ ಜುಲೈ 1 ರಿಂದ ಜುಲೈ 3ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿದ್ದು, ನಂತರ ಹೆಚ್ಚಾಗುವ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಕೇರಳದಲ್ಲಿ ಮಳೆ ಕ್ಷೀಣಿಸಲಿದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...