Advertise

07 June 2024

08.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ, ರಾಯಚೂರು, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈಗಿನಂತೆ  ಇವತ್ತು ಸಂಜೆ ಅಥವಾ ರಾತ್ರಿಯಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಜೂನ್ 8ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗು ಲಕ್ಷಣಗಳಿದ್ದರೆ, ಜೂನ್ 10ರ ನಂತರ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಮುಂದುವರಿದರೂ ಜೂನ್ 10ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 



No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...