Advertise

09 June 2024

10.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಭಾರಿ ಮಳೆಯ ಮುನ್ಸೂಚೆನೆ ಇದೆ. ಗೋವಾ ಉತ್ತರ ಕನ್ನಡ ಗಡಿಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. 

ಕೊಡಗು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬೆಳಗಾವಿ, ಚಿಕ್ಕೋಡಿ ಸಹ ಭಾರಿ ಮಳೆಯ ಮುನ್ಸೂಚೆನೆ ಇದೆ. 
ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬೀದರ್ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ವಾಯುನಿಮ್ನತೆಯ (ಕಡಿಮೆ ಒತ್ತಡ) ಪರಿಣಾಮದಿಂದ ಮುಂಗಾರು ಮಾರುತಗಳು ಕೇಂದ್ರೀಕೃತಗೊಂಡು ಗೋವಾ ಕರಾವಳಿಮೂಲಕ ಸಾಕಗುತ್ತಿವೆ. ಇದರಿಂದ
ಉತ್ತರ ಕರ್ನಾಟಕದ ಭಾಗಗಳಲ್ಲಿ ಜೂನ್ 12 ಅಥವಾ 13ರಂದು ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಮಾಣ ತುಂಬಾ ಕಡಿಮೆಯಾಗಲಿದೆ. 
ಜೂನ್ 13ರ ತನಕ ದಕ್ಷಿಣ ಕರಾವಳಿ ಭಾಗಗಳಲ್ಲಿಯೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಕಡಿಮೆಯಾಗುವ ಸಾಧ್ಯತೆ ಇದೆ. 


No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...