Advertise

10 June 2024

11.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮಹಾರಾಷ್ಟ್ರದ ಕರಾವಳಿ ಮೂಲಕ ಪ್ರವೇಶಿಸಿದ ಮುಂಗಾರು ಮಾರುತಗಳು ಮಧ್ಯ ಮಹಾರಾಷ್ಟ್ರದಿಂದ ದಕ್ಷಿಣಾಭಿಮುಖವಾಗಿ ಚಲಿಸಿ ಕರ್ನಾಟಕಕ್ಕೆ ಪ್ರವೇಶಿಸುವುದರಿಓದ ವಿಜಯಪುರ ಭಾರಿ ಮಳೆಯ ಮುನ್ಸೂಚೆನೆ ಇದೆ. ಕೊಪ್ಪಳ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ 

ಈಗಿನಂತೆ ಜೂನ್ 11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ.  ಜೂನ್ 12ರಿಂದ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, 
ಕರಾವಳಿ ಭಾಗಗಳಲ್ಲಿ ಜೂನ್ 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...