Advertise

11 June 2024

12.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಜಿಲ್ಲೆಯಾದ್ಯಂತ ಉತ್ತಮ, ದಕ್ಷಿಣ ಕನ್ನಡ ಸಾಮಾನ್ಯ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಬಾಗಲಕೋಟೆ, ಗದಗ, ಕೊಪ್ಪಳ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಈಗಿನಂತೆ ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...