Advertise

14 June 2024

15.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. (ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.) 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತು ರಾಜ್ಯದಾದ್ಯಂತ ಜೋರು ಮಳೆಯ ಮುನ್ಸೂಚೆನೆ ಇರುವುದಿಲ್ಲ. 

ಈಗಿನಂತೆ ಜೂನ್ 15ರಂದು ಸಹ ರಾಜ್ಯದಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಮತ್ತೆರಡು ದಿನಗಳಲ್ಲಿ ಮಳೆ ಕಡಿಮೆಯಾಗಲಿದೆ. ಆದರೆ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

12.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...