15 June 2024

16.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. (ಬಿಸಿಲಿನ ತಾಪದಿಂದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ.) 

ಬೀದರ್ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಜೂನ್ 16ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಜೋರು ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಆದರೆ ಜೂನ್ 21ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

No comments:

Post a Comment