Advertise

16 June 2024

17.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.06.2024 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ -  ಗೋವಾ ಗಡಿಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರಿನ ಆಗುಂಬೆ, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಪಾವಗಢ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಚಿಕ್ಕೋಡಿ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ  ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಜೂನ್ 21ರ ತನಕವೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೂನ್ 22ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಆಗ್ನೇಯ ಮಡಗಾಸ್ಕರ್ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಮುಂಗಾರಿಗೆ ಸ್ವಲ್ಪ ಹಿನ್ನಡೆ ಸಾಧ್ಯತೆ ಇದೆ. 

No comments:

Post a Comment