Advertise

20 June 2024

21.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ತೀರದ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ರಾಜ್ಯದ ಕರಾವಳಿ ಜಿಲ್ಲೆಗಳ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಅರಬ್ಬಿ ಸಮುದ್ರದಲ್ಲಿ ಮುಂಗಾರು ಈಗಾಗಲೇ ಚುರುಕಾಗಿದ್ದು, ಜೂನ್ 21,22ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ತನ್ನ ನೈಜ ವೈಭವವನ್ನು ತೋರಲಿದೆ. ಜೂನ್ 28ರ ತನಕವೂ ಭಾರಿ ಮಳೆಯ ಮುನ್ಸೂಚೆನೆ ಇದೆ. 
ರಾಜ್ಯದ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...