Advertise

21 June 2024

22.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಧ್ಯಾಹ್ನ ನಂತರ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ, ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ನಂತರ ಜೂನ್ 28ರ ತನಕವೂ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಜೂನ್ 29ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. 
ರಾಜ್ಯದ ಒಳನಾಡು ಭಾಗಗಳಲ್ಲಿಯೂ ಜೂನ್ 28ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...