24 June 2024

25.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನ ಪ್ರಕಾರ ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳಿದ್ದು, ಮಳೆಯ ಕೊರತೆ ಉಂಟಾಗಲಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮುನ್ಸೂಚನೆಯಲ್ಲಿ ಇದ್ದಷ್ಟು ಮಳೆಯಾಗುತ್ತಿಲ್ಲ. ಜೂನ್ 28ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ. 


No comments:

Post a Comment