Advertise

27 June 2024

28.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗುವ ಲಕ್ಷಣಗಳಿದ್ದರೂ  ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ರಾಜ್ಯದ ಮಲೆನಾಡು ಭಾಗಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಜೂನ್ 29ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಈಗ ರಾಜ್ಯದ ಒಳನಾಡು ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗುತ್ತಿದ್ದು, ಜುಲೈ 1 ಅಥವಾ 2 ರಿಂದ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಆದರೂ ಪರಿಸ್ಥಿತಿ ಬದಲಾಗಬಹುದು. ಕಾದು ನೋಡಬೇಕಾಗಿದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...