Advertise

29 June 2024

30.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ 2 ರಿಂದ 3 ಮಳೆಯ ಸಾಧ್ಯತೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಪ್ರಕಾರ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 4ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಜೂನ್ 30 ಹಾಗೂ ಜುಲೈ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಜುಲೈ 2 ರಿಂದ 4ರ ತನಕ ಕರಾವಳಿ ಭಾಗಗಳನ್ನು ಹೊರತು ಪಡಿಸಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಜುಲೈ 5 ಅಥವಾ 6ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. 



No comments:

Post a Comment

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...