Advertise

31 July 2024

01.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಲೆನಾಡು ಭಾಗಗಳಲ್ಲಿಯೂ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚೆನೆ ಇದೆ. ಕೊಡಗು ಹಾಗೂ ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಶಿೃಂಗೇರಿ, ಕುದುರೆಮುಖ, ಮೂಡಿಗೆರೆ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಆಗುಂಬೆ, ತೀರ್ಥಹಳ್ಳಿ ಭಾಗಗಳಲ್ಲಿಯೂ ಮಳೆ ಸ್ವಲ್ಪ ಜಾಸ್ತಿ ಇದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ದಾವಣಗೆರೆ, ಹಾವೇರಿ, ವಿಜಯಪುರ, ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಇವತ್ತಿನಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ನಿನ್ನೆಯ ಮಳೆಯ ಅನಿರೀಕ್ಷಿತವಾಗಿತ್ತು. ಆಗಾಧ ಮೋಡ ಹಾಗೂ ಅತಿ ಭಾರಿ ಮಳೆಗೆ ಬೇರೆಯದೇ ವೈಜ್ಞಾನಿಕ ಕಾರಣಗಳಿರಬಹುದು. ಸಾಮಾನ್ಯ ಮುಂಗಾರು ಆಗಿರಲಾರದು. 
ಈಗಿನಂತೆ ಆಗಷ್ಟ್ 2ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆಗಷ್ಟ್ 6ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಗುಡುಗು ಸಹಿತ ಇರಬಹುದು).
ಮುಂಗಾರು ದುರ್ಬಲಗೊಳ್ಳತ್ತಿದೆಯೇ? ಹಿಂದೂಮಹಾಸಾಗರ ಹಾಗೂ ದಕ್ಷಿಣ ಅರಬ್ಬಿ ಸಮುದ್ರ ಗಮನಿಸುವಾಗ ಈ ಪ್ರಶ್ನೆ ಉದ್ಭವಿಸುತ್ತಿದೆ. ಮಾರುತಗಳು ಮಂದವಾಗಿ ದುರ್ಬಲಗೊಂಡತೆ ಗೋಚರಿಸುತ್ತಿದೆ. 

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...