Advertise

01 July 2024

02.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಸಾಮಾನ್ಯ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಇದ್ದರೆ, ಉಳಿದ ಹೆಚ್ಚಿನ ಭಾಗಗಳಲ್ಲಿ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಇವತ್ತಿನಿಂದ ಜುಲೈ 3ರ ತನಕ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ, ಜುಲೈ 4 ರಿಂದ ಹೆಚ್ಚಾಗುವ ಮುನ್ಸೂಚನೆ ಇದೆ. ಜುಲೈ 5 ರಿಂದ ರಾಜ್ಯದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿಯೂ ಮಳೆಯ ಮುನ್ಸೂಚೆನೆ ಇದೆ. ನಂತರ ಕ್ರಮೇಣ ರಾಜ್ಯದಾದ್ಯಂತ ಮುಂಗಾರು ಚುರುಕಾಗುವ ಲಕ್ಷಣಗಳಿವೆ. 





No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...