Advertise

04 July 2024

05.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾವೇರಿ, ಧಾರವಾಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಯಾದಗಿರಿ ಆಂದ್ರಾ ಗಡಿ ಭಾಗಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ದಕ್ಷಿಣ ದ್ರುವ ಭಾಗದಿಂದ ಬರುತ್ತಿರುವ ಮಾರುತಗಳು ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ 9ರಿಂದ ರಾಜ್ಯದಲ್ಲೂ ಮಳೆಯ ಕ್ಷೀಣಿಸುವ ಸಾಧ್ಯತೆಗಳಿವೆ. ನಂತರ ಮುಂಗಾರು ಚುರುಕಾಗಬೇಕಿದೆ. 
ಈ ನಡುವೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಒಂದೆರಡು ದಿನ ಮಳೆಯ ಮುನ್ಸೂಚೆನೆ ಇದ್ದು, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 


No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...