10.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಸಾಮಾನ್ಯ ಮಳೆ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯಕ್ಕಿಂತ ಸ್ವಲ್ಪ ಜಾಸ್ತಿ ಮಳೆಯಾಗುವ ಮುನ್ಸೂಚನೆ ಇದ್ದರೂ ತೀವ್ರತೆ ಕಡಿಮೆ ಇರಬಹುದು.
ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೋಲಾರ ಒಂದೆರಡು ಕಡೆ, ತುಮಕೂರು (ಪಾವಗಢ ಸೇರಿದಂತೆ) ಒಂದೆರಡು ಕಡೆ, ಚಿತ್ರದುರ್ಗ, ವಿಜಯಪುರ, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜುಲೈ 12ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ.
ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ, ಮಲೆನಾಡು ಭಾಗಗಳಲ್ಲಿ ಕಾಪಿ ತೋಟಗಳಿಗೆ ಔಷಧಿ ಸಿಂಪಡಿಸಲು ಇವತ್ತು ಹಾಗೂ ಜುಲೈ 11ರ ತನಕ ಸ್ವಲ್ಪ ಅವಕಾಶ ಸಿಗಬಹುದು. ಮಧ್ಯಾಹ್ನ ನಂತರ ಅವಕಾಶ ಕಡಿಮೆಯಾಗಬಹುದು. ಮಳೆ ಸಂಪೂರ್ಣ ಬಿಟ್ಟು ಸಿಗುವ ಸಾಧ್ಯತೆ ಕಡಿಮೆ.
No comments:
Post a Comment