17.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಪಾವಗಢ, ಚಿತ್ರದುರ್ಗ, ಬಳ್ಳಾರಿ ದಕ್ಷಿಣ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ವಿಜಯಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಆದರೂ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
No comments:
Post a Comment