Advertise

19 July 2024

20.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಆದರೆ ತೀವ್ರತೆ ಸ್ವಲ್ಪ ಕಡಿಮೆ ಇರಬಹುದು. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ (ತೀವ್ರತೆ ಸ್ವಲ್ಪ ಕಡಿಮೆ ಇರಬಹುದು) 

ಹಾವೇರಿ, ಧಾರವಾಡ, ಬೆಳಗಾವಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಒಡಿಸ್ಸಾದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಜುಲೈ 20ರ ರಾತ್ರಿ ಒಡಿಸ್ಸಾಕ್ಕೆ ಪ್ರವೇಶಿಸುತ್ತಿದ್ದಂತೆಯೆ ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುಂದುವರಿಯುವ ಮುನ್ಸೂಚನೆ ಇದೆ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...