Advertise

24 July 2024

25.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗಾಳಿಯೊಂದಿಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಗಾಳಿಯೊಂದಿಗೆ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ( ಚಿಕ್ಕೋಡಿ ಸಹಿತ), ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಜುಲೈ 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಮತ್ತೂ ಎರಡರಿಂದ ಮೂರು ದಿನಗಳ ಕಾಲ ಸಾಮಾನ್ಯ ಮಳೆಯ ಮುಂದುವರಿಯುವ ಸಾಧ್ಯತೆ ಇದೆ. 


No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...