Advertise

26 July 2024

27.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಉತ್ತಮ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸಹ ಗಾಳಿಯೊಂದಿಗೆ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 

ಬೆಳಗಾವಿ (ಚಿಕ್ಕೋಡಿ ಸಹಿತ) ಹಾಗೂ ಬಾಗಲಕೋಟೆ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ದಕ್ಷಿಣ ಒಳನಾಡು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಜುಲೈ 17ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 31ರ ತನಕವೂ ಗಾಳಿ ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆಗಷ್ಟ್ 1ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...