Advertise

27 July 2024

28.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಈಗಿನಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜುಲೈ 31ರ ತನಕ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 
ಆಗಷ್ಟ್ 3ರಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮತ್ತು ಆಗಸ್ಟ್ 4 ಅಥವಾ 5ರ ನಂತರ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಈ ಸಮಯದಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...