Advertise

28 July 2024

29.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್  ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಆಗಷ್ಟ್ 1ರ ತನಕ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 2ನೇ ತಾರೀಕಿನಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆಗಷ್ಟ್ 4 ಅಥವಾ 5ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಮಧ್ಯಪ್ರದೇಶದಲ್ಲಿ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗಿದ್ದರ ಪರಿಣಾಮ ದಕ್ಷಿಣ ಭಾರತದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಈ ತಿರುಗುವಿಕೆಯು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ. 


No comments:

Post a Comment

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಉತ್ತಮ ಮಳೆ, ದ...