Advertise

29 July 2024

30.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30. 07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಉತ್ತಮ ಮಳೆಯ ಮುನ್ಸೂಚೆನೆ ಇದ್ದರೂ ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಭಾಗಗಳಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆಯ ಕಾರಣದಿಂದ ಮುನ್ಸೂಚನೆಯಷ್ಟು ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ)

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ರಾಮನಗರ, ಬೆಂಗಳೂರು ನಗರ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಈಗಾಗಲೇ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ ಆಗಷ್ಟ್ 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಆಗಷ್ಟ್ 2 ಅಥವಾ 3 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...