Advertise

30 July 2024

31.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲಾ ಭಾಗಗಳಲ್ಲಿ ಉತ್ತಮ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಭಾಗಗಳಲ್ಲಿ ಉಂಟಾಗಿದ್ದ ತಿರುಗುವಿಕೆ ಶಿಥಿಲಗೊಂಡ ಕಾರಣ ಮುಂಗಾರು ಮತ್ತೆ ಉತ್ತಮ ಸ್ಥಿತಿಗೆ ತಲುಪಿದೆ. 

ಕೊಡಗು ಭಾರಿ ಮಳೆಯ ಮುನ್ಸೂಚೆನೆ ಇದ್ದು, ಹಾಸನ, ಚಿಕ್ಕಮಗಳೂರು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಜುಲೈ 31 ಹಾಗೂ ಆಗಸ್ಟ್ 1ನೇ ತಾರೀಕಿನಂದು ಕೊಡಗು ಜಿಲ್ಲೆಯಲ್ಲಿ ಆತಿಭಾರಿ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಮುಂಗಾರು ಚುರುಕಾಗಿರುವ ಕಾರಣ ಆಗಸ್ಟ್ 1ರ ತನಕ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕೊಡಗು ಭಾರಿ ಮಳೆಯ ಮುನ್ಸೂಚೆನೆ ಇದೆ. ಆಗಸ್ಟ್ 1ರ ನಂತರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...