Advertise

02 August 2024

03.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

03. 08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಅವಧಿಯ ಅಥವಾ ನಿರಂತರವಾಗಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 
ಈಗಿನಂತೆ ಈ ಸಾಮಾನ್ಯ ಮಳೆಯು ಆಗಸ್ಟ್ 6ರ ವರೆಗೆ ಮುಂದುವರಿಯುವ ಮುನ್ಸೂಚೆನೆ ಇದೆ.

 ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಮಲೆನಾಡು ಭಾಗಗಳಲ್ಲಿಯೂ ಆಗಸ್ಟ್ 6ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ 

ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಆಗಸ್ಟ್ 7ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತಯೇ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 


No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...