Advertise

04 August 2024

05.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಳೆಯ ಮಧ್ಯ ಬಿಡುವಿನ ಹೊತ್ತು ಹೆಚ್ಚಿರಬಹುದು 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಮಳೆ ಜಾಸ್ತಿ ಇರಬಹುದು. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕರಾವಳಿಯಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಆಗಷ್ಟ್ 6ರಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ, ಆಗಸ್ಟ್ 8ರಿಂದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ. 
ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 4ರಿಂದ ಅಲ್ಲಲ್ಲಿ ಉತ್ತಮ ಮತ್ತು ಜುಲೈ 6ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...