Advertise

08 August 2024

09.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಿನ ಪಾವಗಢ, ಚಿತ್ರದುರ್ಗ ಉತ್ತರ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಹಿತ ಸಾಧ್ಯತೆ ಇದೆ.

ಉಳಿದ ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...