Advertise

11 August 2024

12.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಹಾಗೂ ರಾತ್ರಿಯ ವೇಳೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕಾಸರಗೋಡಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಅಲ್ಲಲ್ಲಿ, ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರದ ಕೊಳ್ಳೇಗಾಲ ಹಾಗೂ ಬೆಂಗಳೂರು ದಕ್ಷಿಣ ಮಳೆ ಸ್ವಲ್ಪ ಜಾಸ್ತಿಯೇ ಇರಬಹುದು.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಉತ್ತರ ಒಳನಾಡು ಭಾಗಗಳಲ್ಲಿ ಆಗಸ್ಟ್ ತಿಂಗಳಲ್ಲಿ ಮಳೆಯ ಕೊರತೆ ಉಂಟಾಗುವ ಲಕ್ಷಣಗಳಿವೆ. 
ಕರಾವಳಿಯಲ್ಲಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಅಷ್ಟೇನು ಮಳೆಯ ಮುನ್ಸೂಚನೆ ಕಾಣುತ್ತಿಲ್ಲ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...